
ಪ್ರಜಾವಾಣಿ ವಾರ್ತೆ
ಉಡುಪಿ: ‘ಸಂಸ್ಕೃತಿ, ಧಾರ್ಮಿಕತೆಗೆ ಉಡುಪಿ ಹೆಸರುವಾಸಿ. ಪರ್ಯಾಯ ಒಂದು ಧಾರ್ಮಿಕ ಕಾರ್ಯಕ್ರಮ. ಅಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಧ್ವಜ ಹಾರಿಸಿದ ವಿಚಾರವನ್ನು ಇಲ್ಲಿಗೆ ಬಿಟ್ಟುಬಿಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯಾರೂ ಧಾರ್ಮಿಕ ಭಾವನೆ ಕೆರಳಿಸುವ ಕೆಲಸ ಮಾಡಬಾರದು. ಯಾರು ಏನೇ ಮಾತಾಡಲಿ, ಅಗತ್ಯ ಬಿದ್ದರೆ ನಾನು ಚರ್ಚಿಸುತ್ತೇನೆ’ ಎಂದರು.
ಪರಶುರಾಮ ಥೀಂ ಪಾರ್ಕ್ ಕುರಿತ ಪ್ರಶ್ನೆಗೆ, ‘ಕಾಂಗ್ರೆಸ್‌ನವರಿಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ಇಲ್ಲ. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.