ADVERTISEMENT

ಮಕ್ಕಳ ಕಳ್ಳರ ವದಂತಿ ಹಬ್ಬಿಸಿದರೆ ಕಾನೂನು ಕ್ರಮ: ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 5:08 IST
Last Updated 16 ಸೆಪ್ಟೆಂಬರ್ 2022, 5:08 IST
ಹಾಕೆ ಅಕ್ಷಯ್‌ ಮಚ್ಚಿಂದ್ರ, ಎಸ್‌ಪಿ
ಹಾಕೆ ಅಕ್ಷಯ್‌ ಮಚ್ಚಿಂದ್ರ, ಎಸ್‌ಪಿ   

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳ ಕಳ್ಳರ ಬಗ್ಗೆ ಬೇರೆ ದೇಶ, ರಾಜ್ಯಗಳ ವಿಡಿಯೋಗಳನ್ನು ಹರಿಬಿಡಲಾಗುತ್ತಿದ್ದು ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT