ಪ್ರಾತಿನಿಧಿಕ ಚಿತ್ರ
ಬೈಂದೂರು: ತಾಲ್ಲೂಕಿನ ಬಿಜೂರು ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಶುಕ್ರವಾರ ರಾತ್ರಿ ಕೊಡಿಕೇರಿಮನೆ ನೇತ್ರಾವತಿ ಸುಧಾಕರ ದೇವಾಡಿಗ ಅವರ ಮನೆ ಆವರಣದಲ್ಲಿ ಸರಪಳಿಯಿಂದ ಕಟ್ಟಿದ್ದ ನಾಯಿಯನ್ನು ಚಿರತೆ ದಾಳಿ ಮಾಡಿ ಸಾಯಿಸಿ ಎಳೆದುಕೊಂಡು ಹೋಗಲು ಯತ್ನಿಸಿ ಸಾಧ್ಯವಾಗದೆ ಬಿಟ್ಟು ಹೋಗಿದೆ.
ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಈ ದಾರಿಯಲ್ಲಿ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಸಂಚರಿಸುವುದರಿಂದ ಅನಾಹುತ ಸಂಭವಿಸುವ ಭೀತಿ ಇದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಹಿಂದೆಯೂ ಕೋಳಿ, ನಾಯಿಗಳ ಮೇಲೆ ದಾಳಿ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.