ಉಡುಪಿ: ಮಣಿಪಾಲದ ಮನೆಯೊಂದರ ಅಂಗಳದಲ್ಲಿ ಚಿರತೆ ಓಡಾಡಿರುವ ದೃಶ್ಯಗಳು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ದಾಖಲಾಗಿರುವ ಕಾರಣ, ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆಯು ಬೋನು ಇರಿಸಿದೆ.
ಮಣಿಪಾಲದ ಎಂಡ್ ಪಾಯಿಂಟ್ ಬಳಿ ಚಿರತೆಯನ್ನು ಮತ್ತೆ ನೋಡಿರುವುದಾಗಿ ಭದ್ರತಾ ಸಿಬ್ಬಂದಿ ತಿಳಿಸಿರುವುದಾಗಿ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಸುರೇಶ್ ಗಾಣಿಗ ತಿಳಿಸಿದ್ದಾರೆ.
ಎಂಡ್ ಪಾಯಿಂಟ್ ಬಳಿ ಭದ್ರತಾ ಸಿಬ್ಬಂದಿ ವಾಸವಿರುವಲ್ಲಿ ನಾಯಿಗಳನ್ನು ಸಾಕಿದ್ದಾರೆ ಅವುಗಳನ್ನು ಹಿಡಿಯಲು ಚಿರತೆ ಬಂದಿರುವ ಸಾಧ್ಯತೆ ಇದೆ ಎಂದು ವಿವರಿಸಿದರು.
ಸುರೇಶ್ ಗಾಣಿಗ ಅವರ ನೇತೃತ್ವದಲ್ಲಿ ಸಿಬ್ಬಂದಿ, ಎಂಡ್ ಪಾಯಿಂಟ್ ಪ್ರದೇಶದಲ್ಲಿ ಬೋನು ಇರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.