ADVERTISEMENT

ಬೀಚ್‌ನಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 14:38 IST
Last Updated 15 ಅಕ್ಟೋಬರ್ 2021, 14:38 IST
ಮಲ್ಪೆ ಬೀಚ್‌ನಲ್ಲಿ ಆಟವಾಡುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರನ್ನು ಲೈಫ್‌ ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದರು.
ಮಲ್ಪೆ ಬೀಚ್‌ನಲ್ಲಿ ಆಟವಾಡುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರನ್ನು ಲೈಫ್‌ ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದರು.   

ಉಡುಪಿ: ಮಲ್ಪೆ ಬೀಚ್‌ನಲ್ಲಿ ಆಟವಾಡುವಾಗ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರನ್ನು ಲೈಫ್‌ ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಪವನ್‌, ಚೇತನ್ ಹಾಗೂ ಪ್ರಿಯದರ್ಶಿನಿ ಪ್ರಾಣಾಪಾಯದಿಂದ ಪಾರಾದವರು.

ಗುರುವಾರ ಸಂಜೆ 5.20ರ ಸುಮಾರಿಗೆ ಬೀಚ್‌ಗಿಳಿದಿದ್ದ ಮೂವರು ಅಪಾಯಕ್ಕೆ ಸಿಲುಕಿರುವುದನ್ನು ಗಮನಿಸಿದ ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT