ADVERTISEMENT

ಉಡುಪಿ | ಆರ್‌ಟಿಒ ಲಕ್ಷೀನಾರಾಯಣ ಮೇಲೆ ಲೋಕಾಯುಕ್ತ ದಾಳಿ: ಕಚೇರಿ, ಮನೆಯಲ್ಲಿ ಶೋಧ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 5:57 IST
Last Updated 14 ಅಕ್ಟೋಬರ್ 2025, 5:57 IST
   

ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ(ಆರ್‌ಟಿಒ ) ಲಕ್ಷೀನಾರಾಯಣ ಪಿ. ನಾಯಕ್ ಅವರ ಮನೆಯಲ್ಲಿ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ.

ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಾರ್ವಜನಿಕರಿಂದ ಬಂದ ದೂರಿನ ಕಾರಣ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ಫ್ಲ್ಯಾಟ್ ನಲ್ಲಿ ಶೋಧ ಕಾರ್ಯ ನಡೆದಿದೆ. ಅಲ್ಲದೆ, ಉಡುಪಿ ತಾಲ್ಲೂಕಿನ ಪಡುಅಲೆವೂರು ಗ್ರಾಮದಲ್ಲಿರುವ ಮಧ್ಯವರ್ತಿಗಳ ಮನೆಗಳಲ್ಲೂ ಶೋಧ ನಡೆದಿದೆ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.