
ಬ್ರಹ್ಮಾವರ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸಹಕಾರ ಸಂಘಗಳ ಮೂಲಕ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಕೆ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ತಿಳಿಸಿದರು.
ಮಂದಾರ್ತಿ ಸೇವಾ ಸಹಕಾರ ಸಂಘದ ನಡೂರು ಶಾಖೆಯ ಹವಾ ನಿಯಂತ್ರಿತ ಕಟ್ಟಡ ‘ಸಹಕಾರ ಸಾನಿಧ್ಯ’ ವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಮಾತನಾಡಿ ಅದರು 25 ವರ್ಷದ ಹಿಂದೆ ಸಹಕಾರ ಸಂಘದಲ್ಲಿ ಮಹಿಳೆಯರ ತೊಡಗಿಸಿಕೊಳ್ಳುವಿಕೆ ಕಡಿಮೆ ಇತ್ತು. ಮಹಿಳೆಯರ ಸ್ವಾವಲಂಬಿ ಬದುಕು ಮತ್ತು ಸ್ವತಂತ್ರ ಜೀವನಕ್ಕಾಗಿ ನವೋದಯ ಸಂಘಗಳನ್ನು ಪ್ರಾರಂಭಿಸಲಾಯಿತು. ಉಭಯ ಜಿಲ್ಲೆಗಳಲ್ಲಿ ಮಹಿಳೆಯರ ಎಲ್ಲ ಸಹಕಾರ ಸಂಘಗಳು ಲಾಭದಿಂದ ನಡೆಯುತ್ತಿವೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಕಾರ ಸಂಘಗಳಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. ಈ ಕ್ಷೇತ್ರ ಪಾರದರ್ಶಕವಾಗಿರಲು ಕೇಂದ್ರ ಹಲವು ಯೋಜನೆಗಳನ್ನು ಜಾರಿತೆ ತರುತ್ತಿದೆ ಎಂದರು. ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಭದ್ರತಾ ಕೊಠಡಿ, ಭದ್ರತಾ ಕೋಶ, ಕಂಪ್ಯೂಟರ್ ಕೊಠಡಿ, ಗೋದಾಮು, ಸ್ವಸಹಾಯ ಸಂಘಗಳನ್ನು ಉದ್ಘಾಟಿಸಲಾಯಿತು. ಠೇವಣಿ ಪತ್ರ ಬಿಡುಗಡೆ, ಸಾಲ ಪತ್ರ ಬಿಡುಗಡೆ, ಉಳಿತಾಯ ಪುಸ್ತಕ ವಿತರಣೆ ಮಾಡಲಾಯಿತು.
ಎಂ.ಎನ್ ರಾಜೇಂದ್ರ ಕುಮಾರ್, ನಡೂರು ಪದ್ಮ ಬಿ.ಶೆಟ್ಟಿ, ಗುತ್ತಿಗೆದಾರ ಪ್ರಮೋದ ಶೆಟ್ಟಿ ಹಾಗೂ ಅಕ್ಷಯ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಬಿ ಅಶೋಕ ಕುಮಾರ್ ಶೆಟ್ಟಿ ಮೈರ್ಮಾಡಿ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ, ಹಿರಿಯರಾದ ಶೇಡಿಕೊಡ್ಲು ವಿಠಲ ಶೆಟ್ಟಿ, ಹಿರಿಯಡಕ ರೈತರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ರಾಜೇಶ ರಾವ್, ಕಾಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಲಂಧರ ಶೆಟ್ಟಿ, ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಜೆ.ಸುಧೀರ್ ಕುಮಾರ್, ಶಾಖಾ ವ್ಯವಸ್ಥಾಪಕ ಆಶ್ರಿತ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ಇದ್ದರು.
ಸಂಘದ ಉಪಾಧ್ಯಕ್ಷ ಸುರೇಶ ಶೆಟ್ಟಿ ಕಾಡೂರು ಸ್ವಾಗತಿಸಿದರು. ಎಚ್.ಗಂಗಾಧರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಲಂಧರ ಶೆಟ್ಟಿ ವಂದಿಸಿದರು. ಅಧ್ಯಾಪಕ ಪ್ರಶಾಂತ ಶೆಟ್ಟಿ ಹಾವಂಜೆ ಮತ್ತು ಎ.ಕೆ.ಶೆಟ್ಟಿ ನಡೂರು ನಿರೂಪಿಸಿದರು.
ಮಂದಾರ್ತಿ ಸೇವಾ ಸಹಕಾರ ಸಂಘವು ಹೆಗ್ಗುಂಜೆ ಶಿರೂರು ಬಿಲ್ಲಾಡಿ ಕಾಡೂರು ನಡೂರು ಗ್ರಾಮಗಳಲ್ಲಿ ಕೃಷಿಕರಿಗೆ ಮತ್ತು ಇತರರಿಗೆ ಕೃಷಿ ಹೈನುಗಾರಿಕೆ ಭೂ ಅಭಿವೃದ್ಧಿ ಮತ್ತು ವ್ಯಾಪಾರ ವಹಿವಾಟುಗಳಿಗೆ ಉತ್ತೇಜನ ನೀಡುತ್ತಿದೆ.ಎಚ್. ಗಂಗಾಧರ ಶೆಟ್ಟಿ ಅಧ್ಯಕ್ಷರು ಮಂದಾರ್ತಿ ಸೇವಾ ಸಹಕಾರ ಸಂಘ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.