ಬ್ರಹ್ಮಾವರ: ನಾಯಕನಾದವನು ನಾಯಕತ್ವ ಗುಣ ಮೈಗೂಡಿಸಿಕೊಂಡು ತನ್ನ ಏಳಿಗೆಯೊಂದಿಗೆ ಇತರರ ಏಳಿಗೆಗೂ ಸಹಕಾರಿಯಾಗಿ ಪಾತ್ರರಾಗಿ ಸಂಸ್ಥೆ ಹಾಗೂ ಸಮಾಜದ ಸರ್ವತೋಮುಖ ಶ್ರೇಯಸ್ಸಿಗೆ ಕಾರಣರಾಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ಡಾ.ಬಿ. ವಿಜಯಚಂದ್ರ ಶೆಟ್ಟಿ ಹೇಳಿದರು.
ಮಾಬುಕಳದ ಫಾರ್ಚ್ಯೂನ್ ಅಕಾಡೆಮಿಕ್ ಆಂಡ್ ಚಾರಿಟಬಲ್ ಟ್ರಸ್ಟ್ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸಾಯನ್ಸ್ನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಚೇರ್‌ಮ್ಯಾನ್ ತಾರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಪ್ರೊ.ಸ್ಮಿತಾ ಮೋಲ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಕಾಲೇಜಿನ ಉಪನ್ಯಾಸಕಿ ವೀಣಾ ಡಿ’ಸೋಜಾ ಸ್ವಾಗತಿಸಿದರು. ಉಪನ್ಯಾಸಕಿ ಪೂರ್ಣಿಮ ಪ್ರಾಸ್ತಾವಿಕವಾಗಿ ಉಪನ್ಯಾಸಕ ಸುಕುಮಾರ್ ಶೆಟ್ಟಿಗಾರ ಅತಿಥಿಗಳನ್ನು ಪರಿಚಯಿಸಿದರು., ಉಪನ್ಯಾಸಕಿ ಅಮಿಷಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಕೋಟೇಶ್ ಎಂ.ಎಚ್ ವಂದಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಕೀರ್ತನ ಪ್ರಭು ಹಾಗೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.