ADVERTISEMENT

ಯಡ್ತಾಡಿ: ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 13:32 IST
Last Updated 2 ಜುಲೈ 2025, 13:32 IST
ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ ಕುಮಾರ್ ಶೆಟ್ಟಿ ಅವರ ಗದ್ದೆಯಲ್ಲಿ 17ನೇ ವರ್ಷದ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.
ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ ಕುಮಾರ್ ಶೆಟ್ಟಿ ಅವರ ಗದ್ದೆಯಲ್ಲಿ 17ನೇ ವರ್ಷದ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.   

ಬ್ರಹ್ಮಾವರ: ಮಂಗಳೂರಿನ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, ಇಲ್ಲಿನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ ಕುಮಾರ್ ಶೆಟ್ಟಿ ಅವರ ಗದ್ದೆಯಲ್ಲಿ 17ನೇ ವರ್ಷದ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಚಾಲನೆ ನೀಡಿ ಶುಭ ಹಾರೈಸಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಧನಂಜಯ ಕೃಷಿ ಯಾಂತ್ರೀಕರಣ ಬಗ್ಗೆ ಮಾಹಿತಿ ನೀಡಿದರು. ಕೃಷಿ ವಿಜ್ಞಾನಿ ಶಂಕರ್, ಕೃಷಿ ಡಿಪ್ಲೊಮಾ ಕಾಲೇಜು ಪ್ರಾಂಶುಪಾಲ ಸುಧೀರ್‌ ಕಾಮತ್ ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಚ್. ಜಯಶೀಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ, ಮಳೆನೀರು ಕೊಯ್ಲು ತಜ್ಞ ಬಾರ್ಕೂರು ದಿ.ಸೀತಾರಾಮ ಶೆಟ್ಟಿ ಅವರ ಸಂಸ್ಮರಣೆ ನಡೆಯಿತು.

ADVERTISEMENT

ಕೃಷಿಕ ಬಾರ್ಕೂರು ಶಾಂತಾರಾಮ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾ ಹಿರಿಯ ಅಧಿಕಾರಿ ನೀತು, ವಿಜಯ, ಕೃಷಿಕರಾದ ಕೂಡ್ಲಿ ಶ್ರೀನಿವಾಸ ಉಡುಪ, ಜಯಕರ ಶೆಟ್ಟಿ, ಎಸ್‌ಕೆಡಿಆರ್‌ಡಿಪಿ ಕೃಷಿ ಅಧಿಕಾರಿ ರಾಘವೇಂದ್ರ, ರಾಜಶೇಖರ ಭಾಗವಹಿಸಿದ್ದರು.

ಕಾರ್ಯಕ್ರಮ ಸಂಯೋಜಕ ಯಡ್ತಾಡಿ ಸತೀಶ ಕುಮಾರ ಶೆಟ್ಟಿ ಸ್ವಾಗತಿಸಿದರು. ಜಂಬೂರು ಕೃಷ್ಣ ಅಡಿಗ ಪರಿಚಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಜಯ ಕುಮಾರ್ ಶೆಟ್ಟಿ ನಿರೂಪಿಸಿದರು. ವಿಮಲಾ ಎಸ್. ಶೆಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.