ADVERTISEMENT

ಮಹಾಲಕ್ಷ್ಮೀ ಬ್ಯಾಂಕ್‌ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 16:46 IST
Last Updated 11 ನವೆಂಬರ್ 2022, 16:46 IST
ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್‌ನಿಂದ ಶುಕ್ರವಾರ ಅಜ್ಜರಕಾಡು ಪುರಭವನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ.ಜಿ.ಶಂಕರ್  ಉದ್ಘಾಟಿಸಿದರು.
ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್‌ನಿಂದ ಶುಕ್ರವಾರ ಅಜ್ಜರಕಾಡು ಪುರಭವನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ.ಜಿ.ಶಂಕರ್  ಉದ್ಘಾಟಿಸಿದರು.   

ಉಡುಪಿ: ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್‌ನಿಂದ ಶುಕ್ರವಾರ ಅಜ್ಜರಕಾಡು ಪುರಭವನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕರಾದ ಉದ್ಯಮಿ ಡಾ.ಜಿ.ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯ ಪ್ರತಿಭಾವಂತ 1,200 ವಿದ್ಯಾರ್ಥಿಗಳಿಗೆ ₹ 25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಉಚ್ಚಿಲದ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.

ADVERTISEMENT

ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್‌ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚಿಂದ್ರ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಉಜ್ವಲ್ ಸಂಸ್ಥೆಯ ಅಜಯ್ ಪಿ.ಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.