ADVERTISEMENT

ಹೆಬ್ರಿ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 13:58 IST
Last Updated 2 ಅಕ್ಟೋಬರ್ 2024, 13:58 IST
ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬುಧವಾರ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಯಮಿ ಯಳಗೋಳಿ ಹರೀಶ ಶೆಟ್ಟಿ  ಉದ್ಘಾಟಿಸಿದರು.
ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಬುಧವಾರ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಯಮಿ ಯಳಗೋಳಿ ಹರೀಶ ಶೆಟ್ಟಿ  ಉದ್ಘಾಟಿಸಿದರು.   

ಹೆಬ್ರಿ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷ ಸೀತಾನದಿ ವಿಜಯೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಯಳಗೋಳಿ ಹರೀಶ ಶೆಟ್ಟಿ ಉದ್ಘಾಟಿಸಿದರು. ಮಹಾತ್ಮ ಗಾಂಧಿ, ಲಾಲ್ ಬಹುದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಎಸ್‌ಡಿಎಂಸಿ ಸದಸ್ಯೆ ಬೇಬಿ, ಉಪ ಪ್ರಾಂಶುಪಾಲ ದಿವಾಕರ ಮರಕಾಲ, ಶಿಕ್ಷಕ ವೆಂಕಟರಮಣ ಕಲ್ಕೂರ, ಶಿಕ್ಷಕರು, ಸಿಬ್ಬಂದಿ ಇದ್ದರು. ಶಿಕ್ಷಕ ಪ್ರವೀಣ ಶೆಟ್ಟಿ ಗಾಂಧಿ, ಶಾಸ್ತ್ರಿ ಅವರ ಜೀವನ, ತತ್ವಾದರ್ಶಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳಿಂದ ಶಾಲಾ ಸುತ್ತಮತ್ತ ಸ್ವಚ್ಚತಾ ಅಭಿಯಾನ ನಡೆಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.