ಉಡುಪಿ: ಮಲ್ಪೆಯ ತೊಟ್ಟಂ ಬಳಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಮಗುಚಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಶನಿವಾರ ರಕ್ಷಣೆ ಮಾಡಲಾಯಿತು.
ಜೀವನ್ ಎಂಬುವವರ ದೋಣಿಯಲ್ಲಿ ನಾಲ್ವರು ಮೀನುಗಾರಿಕೆಗೆ ತೆರಳಿದ್ದರು. ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿದೆ. ಕೂಡಲೇ ಸ್ಥಳೀಯರು ಮುಳುಗು ತಜ್ಞ ಈಶ್ವರ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ತಂಡವು ಮೀನುಗಾರರನ್ನು ರಕ್ಷಣೆ ಮಾಡಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.