ಉಡುಪಿ: ಅಭಿಯೋಜನೆ ಸಹಾಯಕ ನಿರ್ದೇಶಕಿ ಹಾಗೂ ಕಿರಿಯ ಕಾನೂನು ಅಧಿಕಾರಿಯಾಗಿದ್ದ ಮಮ್ತಾಜ್ ಅವರು ಜಿಲ್ಲಾ ನ್ಯಾಯಾಧೀಶರ ಹುದ್ದೆ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಆಯ್ಕೆಯಾಗಿದ್ದಾರೆ.
ಈಚೆಗೆ ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಆಯ್ಕೆಯಾದ 12 ಮಂದಿಯ ಪೈಕಿ ಮಮ್ತಾಜ್ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಮುಲ್ಕಿ ಮೂಲದ ಅತಿಜಮ್ಮ ಹಾಗೂ ಅಬ್ದುಲ್ ರೆಹಮಾನ್ ದಂಪತಿಯ ಪುತ್ರಿಯಾದ ಮಮ್ತಾಜ್ ಮಂಗಳೂರಿನ ಎಸ್‌ಡಿಎಂ ಕಾನೂನು ವಿದ್ಯಾಲಯದಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. ಮೈಸೂರು ಮುಕ್ತ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
2010ರಲ್ಲಿ ಭಟ್ಕಳದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎಪಿಪಿ ಆಗಿ ಕಾರ್ಯ ನಿರ್ವಹಿಸಿ ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದರು. ನಂತರ ಜಿಲ್ಲಾ ಎಸ್‌ಪಿ ಕಚೇರಿಗೆ ಎಡಿಪಿಯಾಗಿ ಭಡ್ತಿ ಹೊಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.