ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ (ಮಾಹೆ) ಉಡುಪಿಯ ಹಾವಂಜೆ ಬಳಿಯ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ ಅನ್ನು ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ಬುಧವಾರ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು, ಮಾಹೆಯು ಈಯೋಜನೆಯ ಮೂಲಕ, ಗಂಭೀರ ಮತ್ತು ಜೀವನದ ಕೊನೆಯ ಹಂತದಲ್ಲಿರುವ ರೋಗಿಗಳ ಮತ್ತು ಅವರ ಕುಟುಂಬದವರ ನೋವು ನಿವಾರಿಸುವ ಮಾನವೀಯತೆಯ ಕೆಲಸವನ್ನು ಮೂಲಭೂತ ಮಾನವ ಹಕ್ಕು ಎನ್ನುವಂತೆ ಪರಿಗಣಿಸಿರುವುದು ಶ್ಲಾಘನೀಯ ಎಂದರು.
ಮಾಹೆ ಟ್ರಸ್ಟ್‌ನ ಟ್ರಸ್ಟಿ ವಾಸಂತಿ ಆರ್. ಪೈ, ಅಧ್ಯಕ್ಷ ಡಾ. ರಂಜನ್ ಪೈ, ಟಿಎಂಎ ಪೈ ಫೌಂಡೇಶನ್ ಅಧ್ಯಕ್ಷ ಡಾ. ಅಶೋಕ್ ಪೈ, ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ. ವೆಂಕಟೇಶ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಅಭಯಚಂದ್ರ ಜೈನ್, ಡಾ. ನಾರಾಯಣ ಸಭಾಹಿತ್, ಡಾ. ಶರತ್ ಕೆ. ರಾವ್, .ಡಾ ಮಧು ವೀರರಾಘವನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.