ಕೋಟ (ಬ್ರಹ್ಮಾವರ): ಮಣೂರು ಪಡುಕೆರೆ ಗೀತಾನಂದ ಫೌಂಡೇಷನ್ ವತಿಯಿಂದ 73ನೇ ಆನಂದ ಸೃಷ್ಟಿ ಕಾರ್ಯಕ್ರಮದ ಅಂಗವಾಗಿ, ಕೋಟ ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ಆಯೋಜನೆಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತು.
ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ಸ್ವಚ್ಛತೆಯ ಜೊತೆಗೆ ಕಸ ಬಿಸಾಡದಂತೆ ಅರಿವು ಮೂಡಿಸುವ ಕೆಲಸಗಳು ನಡೆಯಬೇಕು. ಶಿಬಿರಾರ್ಥಿಗಳು ಮನೆ ಭೇಟಿಯ ಸಮಯದಲ್ಲಿ ಅರಿವು ಮೂಡಿಸಬೇಕು ಎಂದರು.
ಪ್ರಾಂಶುಪಾಲ ರಾಜೇಂದ್ರ ಎಸ್. ನಾಯಕ್ ಮಾತನಾಡಿ, ಯುವಜನರು ಇಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳಾಗಲು ಸಾಧ್ಯ ಎಂದರು.
ಜನತಾ ಸಂಸ್ಥೆಯ ಎಜಿಎಂ ಶ್ರೀನಿವಾಸ, ವ್ಯವಸ್ಥಾಪಕ ಮಿಥುನ್ ಕುಮಾರ್, ಗೀತಾನಂದ ಫೌಂಡೇಷನ್ ಸಂಯೋಜಕ ರವಿಕಿರಣ್, ಕೋಟ ಪಂಚಾಯಿತಿ ಉಪಾಧ್ಯಕ್ಷ ಪಾಂಡು ಪೂಜಾರಿ, ಎನ್ಎಸ್ಎಸ್ ಅಧಿಕಾರಿ ಸಂತೋಷ ನಾಯಕ್, ಆನಂದ ಸೃಷ್ಟಿ ತಂಡದ ಸದಸ್ಯರು, ಶಿಬಿರಾರ್ಥಿಗಳು, ಉಪನ್ಯಾಸಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.