ಪ್ರಜಾವಾಣಿ ವಾರ್ತೆ
ಉಡುಪಿ: ₹5 ಲಕ್ಷ ವೆಚ್ಚದಲ್ಲಿ ನವೀಕರಿಸಿರುವ ಅಂಬಾಗಿಲು ಮೀನು ಮಾರುಕಟ್ಟೆಯನ್ನು ಶಾಸಕ ಯಶ್‌ಪಾಲ್ ಸುವರ್ಣ ಬುಧವಾರ ಉದ್ಘಾಟಿಸಿದರು.
ಅವರು ಮಾತನಾಡಿ, ಕಳೆದ ಬಾರಿ ಮೀನು ಮಾರುಕಟ್ಟೆಗೆ ಭೇಟಿ ನೀಡಿದ್ದಾಗ ಮಹಿಳಾ ಮೀನು ಮಾರಾಟಗಾರರು ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆ ಇರುವ ಬಗ್ಗೆ ಮನವಿ ಮಾಡಿದ್ದರು. ನಗರಸಭೆ ವತಿಯಿಂದ ಅನುದಾನ ಒದಗಿಸಿ ಕಾಮಗಾರಿ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ಮೀನು ಮಾರುಕಟ್ಟೆ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಜಯಂತಿ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಮಂಜುಳ ನಾಯಕ್, ಮಹಿಳಾ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಸಾಲ್ಯಾನ್, ಸ್ಥಳೀಯ ಮುಖಂಡರಾದ ಉಮೇಶ್ ಶೆಟ್ಟಿ, ಪ್ರಸಾದ್ ರಾವ್, ರುಡಾಲ್ಫ್ ಡಿಸೋಜಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.