ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ ಮತ್ತು ಇಲ್ಲಿನ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಎಸ್ಎಸ್ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಶನಿವಾರ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.
ಉದ್ಘಾಟಿಸಿದ ಎಸ್ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ ಶೆಟ್ಟಿ ಮಾತನಾಡಿ, ಕನ್ನಡದ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು. ಕಲಿಕೆಗೆ ಮಾಧ್ಯಮ ಮುಖ್ಯವಲ್ಲ ಕಲಿಯುವ ಮನಸ್ಸು ಮುಖ್ಯ. ಮಾತೃಭಾಷೆಯಲ್ಲಿ ಉತ್ತಮ ಪ್ರತಿಭೆ ತೋರ್ಪಡಿಸಲು ಸಾಧ್ಯ. ಅಂತಹ ಎಲ್ಲಾ ಪ್ರತಿಭೆಗಳು ಇಂತಹ ಕಾರ್ಯಕ್ರಮಗಳ ಮೂಲಕ ಅನಾವರಣಗೊಳ್ಳಬೇಕು ಎಂದರು.
ಆಶಯ ಭಾಷಣ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು, ಕನ್ನಡದ ಪದಬಳಕೆ ವ್ಯಾವಹಾರಿಕವಾಗಿ ಹೆಚ್ಚಾಗಬೇಕು. ಎಷ್ಟು ಭಾಷೆಗಳನ್ನಾದರೂ ಕಲಿಯಿರಿ. ಆದರೆ ಮಾತೃಭಾಷೆಯ ಪ್ರೀತಿ, ಬಳಕೆ ಕಡಿಮೆಯಾಗಬಾರದು ಎಂದರು.
ಕಸಾಪ ಹೆಬ್ರಿ ಘಟಕದ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪಿ.ವಿ. ಆನಂದ ಸಾಲಿಗ್ರಾಮ, ಪದಾಧಿಕಾರಿ ನರಸಿಂಹ ಮೂರ್ತಿ, ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಭಾಗವಹಿಸಿದ್ದರು.
ಉಪನ್ಯಾಸಕ ದೀಪಕ್ ಎನ್. ಸ್ವಾಗತಿಸಿದರು. ಕಸಾಪ ಹೆಬ್ರಿ ಘಟಕದ ಗೌರವ ಕಾರ್ಯದರ್ಶಿ ಮಂಜುನಾಥ ಕೆ. ಶಿವಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಪ್ರೀತೇಶ ಶೆಟ್ಟಿ ವಂದಿಸಿದರು. ಗೌರವ ಕಾರ್ಯದರ್ಶಿ ಪ್ರವೀಣ ಕುಮಾರ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.