ADVERTISEMENT

ಉಡುಪಿ | ಎಂಜಿಎಂ ಸಂಧ್ಯಾ ಕಾಲೇಜು: ಸಂಸ್ಥಾಪನಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:42 IST
Last Updated 15 ಸೆಪ್ಟೆಂಬರ್ 2025, 4:42 IST
ಎಂಜಿಎಂ ಸಂಧ್ಯಾ ಕಾಲೇಜಿನ  ಸಂಸ್ಥಾಪನಾ ದಿನಾಚರಣೆ  ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು
ಎಂಜಿಎಂ ಸಂಧ್ಯಾ ಕಾಲೇಜಿನ  ಸಂಸ್ಥಾಪನಾ ದಿನಾಚರಣೆ  ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು   

ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನ 3ನೇ ಸಂಸ್ಥಾಪನಾ ದಿನಾಚರಣೆ ಈಚೆಗೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು.

ಶಿಕ್ಷಕರ ದಿನಾಚರಣೆ ಅಂಗವಾಗಿ ಹಿರಿಯ ಪ್ರಾಧ್ಯಾಪಕ ಪ್ರಭಾಕರ್ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ಎಂಜಿಎಂ ಸಂಧ್ಯಾ ಕಾಲೇಜಿನ ಉಪ ಪ್ರಾಂಶುಪಾಲ ಎಂ. ವಿಶ್ವನಾಥ ಪೈ ಅವರ ಪರಿಚಯ ನೀಡಿದರು. ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅವರು ₹9.10 ಲಕ್ಷ ಮೌಲ್ಯದ ವಿದ್ಯಾರ್ಥಿವೇತನ ವಿತರಿಸಿದರು.

ಪ್ರಾಂಶುಪಾಲೆ ಮಾಲತಿ ದೇವಿ, ಎಂಜಿಎಂ ಕಾಲೇಜು ಪ್ರಾಂಶುಪಾಲೆ ವನಿತಾ ಮಯ್ಯ ಭಾಗವಹಿಸಿದ್ದರು. ಮಕುಬ ಕ್ರಿಯೇಷನ್ ಸಹಯೋಗದಲ್ಲಿ ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಅಭಿನಯಿಸಿರುವ ‘ಟ್ರಾಕ್’ ಕಿರುಚಿತ್ರ ಬಿಡುಗಡೆಗೊಳಿಸಲಾಯಿತು. ದೇವಿದಾಸ್ ಎಸ್. ನಾಯಕ್ ಸ್ವಾಗತಿಸಿದರು. ಮಲ್ಲಿಕಾ ಎ. ಶೆಟ್ಟಿ ವಂದಿಸಿದರು. ವರ್ಷಿಣಿ ಕೋಟ್ಯಾನ್ ನಿರೂಪಿಸಿದರು. ಅಕ್ಷತಾ ನಾಯಕ್ ವಿದ್ಯಾರ್ಥಿವೇತನ ಪಟ್ಟಿ ವಾಚಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.