
ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ (ಮಾಹೆ) ಮಣಿಪಾಲ್ ಹಾಸ್ಪಿಟಲ್ಸ್ ಮತ್ತು ರೆಸ್ಪೈಟ್ ಸೆಂಟರ್‌ನಲ್ಲಿ (ಎಂಎಚ್‌ಆರ್‌ಸಿ) ನೂತನವಾಗಿ ನಿರ್ಮಿಸಲಾದ ಹರೀಶ್ ಮತ್ತು ಬೀನಾ ಶಾ ಫೌಂಡೇಷನ್ ಕ್ಲಿನಿಕಲ್ ಬ್ಲಾಕ್ ಅನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು.
ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಹಾಗೂ ಹರೀಶ್ ಮತ್ತು ಬೀನಾ ಶಾ ಫೌಂಡೇಷನ್‌ನ ಅಧ್ಯಕ್ಷ ಹರೀಶ್ ಶಾ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ‘ಮಾನವೀಯ ಮೌಲ್ಯದ ಪಾಠ ಹೇಳಿಕೊಟ್ಟ ಸಂಸ್ಥೆಯೊಂದಿಗೆ ಸಮಾಜಮುಖಿ ಕೆಲಸ ಮಾಡಲು ಕೈಜೋಡಿಸಿರುವುದು ಅತ್ಯಂತ ಖುಷಿ ತಂದಿದೆ’ ಎಂದರು.
ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್ ಪೈ, ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ. ವೆಂಕಟೇಶ್, ಸಹ ಕುಲಪತಿ ಡಾ. ಶರತ್ ಕೆ. ರಾವ್, ಮಾಹೆ ಸಿಒಒ ಡಾ. ಆನಂದ್ ವೇಣುಗೋಪಾಲ್, ಮಣಿಪಾಲ್ ಫೌಂಡೇಷನ್ ಸಿಇಒ ಹರಿನಾರಾಯಣ ಶರ್ಮಾ, ಕೆಎಂಸಿ ಮಣಿಪಾಲದ ಪ್ಯಾಲಿಯೇಟಿವ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ನವೀನ್ ಸಾಲಿನ್ಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.