ADVERTISEMENT

ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 16:53 IST
Last Updated 13 ಸೆಪ್ಟೆಂಬರ್ 2022, 16:53 IST
ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿ.ಆಸ್ಕರ್ ಫೆರ್ನಾಂಡಿಸ್ ಪ್ರಥಮ ಪುಣ್ಯತಿಥಿಯನ್ನು ಅಭಿಮಾನಿಗಳು ಆಚರಿಸಿದರು.
ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿ.ಆಸ್ಕರ್ ಫೆರ್ನಾಂಡಿಸ್ ಪ್ರಥಮ ಪುಣ್ಯತಿಥಿಯನ್ನು ಅಭಿಮಾನಿಗಳು ಆಚರಿಸಿದರು.   

ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿ.ಆಸ್ಕರ್ ಫೆರ್ನಾಂಡಿಸ್ ಪ್ರಥಮ ಪುಣ್ಯತಿಥಿಯನ್ನು ಅಭಿಮಾನಿಗಳು ಆಚರಿಸಿದರು.

ಮಹಿಳಾ ಮತ್ತು ಮಕ್ಕಳ ಅಸ್ಪತ್ರೆ ಹಾಗೂ ಕುಂದಾಪುರ ಸರ್ಕಾರಿ ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಆಸ್ಕರ್ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಆಸ್ಕರ್ ಸ್ಪಂದಿಸುತ್ತಿದ್ದರು. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಪುಣ್ಯಸ್ಮರಣೆಗೆ ನಿಜವಾದ ಅರ್ಥವನ್ನು ಅಭಿಮಾನಿಗಳು ನೀಡಿದ್ದಾರೆ ಎಂದರು.

ADVERTISEMENT

ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಗೌರವ ಅಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ, ಪ್ರಮುಖರಾದ ಮಂಜಿತ್ ನಾಗರಾಜ್, ಮಹಮ್ಮದ್ ಶೀಶ್, ಕಾಂಗ್ರೆಸ್ ಮುಖಂಡರಾದ ಎಂ.ಎ.ಗಫೂರ್, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಅರ್ವಿನ್ ಫೆರ್ನಾಂಡಿಸ್, ನವೀನ್ ಶೆಟ್ಟಿ, ಹರೀಶ್ ಶೆಟ್ಟಿ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ಮಧುಸೂದನ ನಾಯಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.