ಉಡುಪಿ: ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ ದೃಢಪಟ್ಟಿದೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟ್ವಿಟ್ಟರ್‌ನಲ್ಲಿ ಕೋವಿಡ್ ತಗುಲಿರುವ ಬಗ್ಗೆ ಖಚಿತಪಡಿಸಿರುವ ಸಚಿವರು ‘ಅನಿವಾರ್ಯವಾದರೆ ದೂರವಾಣಿಯ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.