ADVERTISEMENT

ಹೋಂ ಕ್ವಾರಂಟೈನ್‌ ಮನೆ ಸೀಲ್‌ಡೌನ್‌: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 13:26 IST
Last Updated 9 ಜೂನ್ 2020, 13:26 IST
ಶ್ರೀರಾಮುಲು
ಶ್ರೀರಾಮುಲು   

ಉಡುಪಿ: ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವವರು ಕಡ್ಡಾಯ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಅವರ ನಿವಾಸಗಳನ್ನು ಸಂಪೂರ್ಣ ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಬಂದವರಿಂದ ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹೋಂ ಕ್ವಾರಂಟೈನ್‌ನಲ್ಲಿರುವವರು ಮನೆಬಿಟ್ಟು ಹೊರಬಂದರೆ ಪ್ರಕರಣ ದಾಖಲಿಸಲಾಗುವುದು. ಕ್ವಾರಂಟೈನ್‌ಗೆ ಒಳಗಾಗುವವರು ಬಡವರಾಗಿದ್ದರೆ ಆಹಾರದ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.