ADVERTISEMENT

ಯುವಕರಿಗೆ ಪ್ರಾತಿನಿಧ್ಯ ನೀಡಲು ಚಕ್ರತೀರ್ಥಗೆ ಮಣೆ

ಶಾಸಕ ರಘುಪತಿ ಭಟ್‌ ಸಮರ್ಥನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 14:22 IST
Last Updated 7 ಫೆಬ್ರುವರಿ 2023, 14:22 IST
ರಘುಪತಿ ಭಟ್‌, ಶಾಸಕ
ರಘುಪತಿ ಭಟ್‌, ಶಾಸಕ   

ಉಡುಪಿ: ಯಕ್ಷಗಾನವನ್ನು ಯುವ ಸಮುದಾಯ ಮುನ್ನಡೆಸಿಕೊಂಡು ಹೋಗಬೇಕು ಎಂಬ ಉದ್ದೇಶದಿಂದ ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಯಕ್ಷಗಾನ ಸಮ್ಮೇಳನದ ಗೋಷ್ಠಿಯ ದಿಕ್ಸೂಚಿ ಭಾಷಣದ ಜವಾಬ್ದಾರಿ ನೀಡಲಾಗಿದೆ ಎಂದು ಶಾಸಕ ಕೆ.ರಘುಪತಿ ಭಟ್‌ ಸಮರ್ಥನೆ ನೀಡಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ರೋಹಿತ್ ಚಕ್ರತೀರ್ಥರ ಆಯ್ಕೆ ವಿಷಯದಲ್ಲಿ ಬಿಜೆಪಿ ಅಜೆಂಡ ಇಲ್ಲ. ರೋಹಿತ್ ಯಕ್ಷಗಾನದ ಬಗ್ಗೆ ಆಳವಾದ ಅಧ್ಯಯನ ಮಾಡಿರುವ ಕಾರಣ ಅವರನ್ನು ಸಮಿತಿ ಆಯ್ಕೆ ಮಾಡಿದೆ ಎಂದರು.

ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ:

ADVERTISEMENT

ಹಿಂದೆ ಯಾವುದೋ ಒಂದು ಕಾರಣಕ್ಕೆ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ಇಡೀ ಬ್ರಾಹ್ಮಣ ಸಮಾಜವನ್ನು ದೂಷಿಸುವುದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವ್ಯಕ್ತಿತ್ವವನ್ನು ತೋರಿಸುತ್ತದೆ. ಪ್ರಹ್ಲಾದ್ ಜೋಷಿ ಚಿತ್ಪಾವನ, ಪೇಶ್ವೆ ಬ್ರಾಹ್ಮಣರಲ್ಲ; ಮಾಧ್ವ ಸಮುದಾಯದವರಾಗಿದ್ದು ಉತ್ತರಾಧಿ ಮಠಕ್ಕೆ ನಡೆದುಕೊಳ್ಳುತ್ತಾರೆ ಎಂದು ರಾಜ್ಯ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯದ ಡಿಎನ್‌ಎ ಸರಿಯಿಲ್ಲ ಎಂದು ನಿಂಧಿಸುವುದು ಅವಿವೇಕತನದ ಹೇಳಿಕೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.