ADVERTISEMENT

ಮನರೇಗಾ ಬಚಾವೋ ಸಂಗ್ರಾಮಕ್ಕೆ ಕಾಪುವಿನಿಂದ ಚಾಲನೆ: ವಿನಯ್ ಕುಮಾರ್ ಸೊರಕೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 7:40 IST
Last Updated 29 ಜನವರಿ 2026, 7:40 IST
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿದರು
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿದರು   

ಕಾಪು (ಪಡುಬಿದ್ರಿ): ಮನರೇಗಾದ ಪ್ರಾಮುಖ್ಯತೆ ಉಳಿಸಲು, ಉದ್ಯೋಗ ಖಾತರಿಯ ಹಕ್ಕನ್ನು ರಕ್ಷಿಸಲು, ಅದರ ಮೂಲಸ್ವರೂಪ ಮರುಸ್ಥಾಪಿಸಲು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ರಾಷ್ಟ್ರವ್ಯಾಪಿ ‘ಮನರೇಗಾ ಬಚಾವೋ ಸಂಗ್ರಾಮ್’ ಆಂದೋಲನ ಆಯೋಜಿಸಲು ಸೂಚಿಸಿದೆ. ಕಾಪುವಿನಲ್ಲಿ ಪ್ರಥಮ ಸಮಾವೇಶ ಆಯೋಜಿಸುವ ಮೂಲಕ ಚಾಲನೆ ನೀಡಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಗೆ ಕಾರ್ಯದರ್ಶಿಯಾಗಿ ನೇಮಕಗೊಂಡ ಜೇಬಾ ಸೆಲ್ವನ್ ಅವರನ್ನು ಗೌರವಿಸಲಾಯಿತು. ಉತ್ತಮ ಉದ್ಯಮಿ ಪ್ರಶಸ್ತಿಗೆ ಭಾಜನರಾದ ಕಾಪು ಯೋಜನಾ ಪ್ರಾಧಿಕಾರದ ಸದಸ್ಯ ಹರೀಶ್ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ ಮಾತನಾಡಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ. ಸುಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ನವೀನ್ ಚಂದ್ರ ಸುವರ್ಣ, ಪ್ರಶಾಂತ್ ಜತ್ತನ್ನ, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ಹಸನಬ್ಬ ಶೇಖ್, ರಿಯಾಜ್ ಮುದರಂಗಡಿ ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಮೀರ್ ಮೊಹಮ್ಮದ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.