ADVERTISEMENT

ಉಡುಪಿ: ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ಪೂರ್ಣ...

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 6:18 IST
Last Updated 28 ನವೆಂಬರ್ 2025, 6:18 IST
<div class="paragraphs"><p>ಮೋದಿ ರೋಡ್‌ ಶೋ </p></div>

ಮೋದಿ ರೋಡ್‌ ಶೋ

   

ಉಡುಪಿ: ಕೃಷ್ಣಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಉಡುಪಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ರೋಡ್‌ ಶೋ ನಡೆಸಿದರು.

ಆದಿ ಉಡುಪಿಯ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಮೋದಿ ಅವರು ಬಿಗಿ ಭದ್ರತೆಯ ನಡುವೆ, ನಗರದ ಬನ್ನಂಜೆ ವೃತ್ತದಿಂದ ಕಲ್ಸಂಕ ವೃತ್ತದ ವರೆಗೆ ರೋಡ್ ಶೋ ನಡೆಸಿ, ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರತ್ತ ಕೈಬೀಸಿದರು.

ADVERTISEMENT

ಪ್ರಧಾನಿ ಅವರ ರೋಡ್‌ ಶೋ ವೀಕ್ಷಿಸಲು ಜನರು ಬೆಳಿಗ್ಗೆಯೇ ಜಿಲ್ಲೆಯ ವಿವಿಧೆಡೆಗಳಿಂದ ಬಂದು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದರು. ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದರಿಂದ ಜನರು ವಾಹನ ಪಾರ್ಕಿಂಗ್‌ ಸ್ಥಳಗಳಿಂದ ನಡೆದುಕೊಂಡೇ ರೋಡ್‌ ಶೋ ನಡೆಯುವ ಸ್ಥಳಗಳಿಗೆ ಬಂದಿದ್ದರು.

ರೋಡ್‌ ಶೋ ವೇಳೆ ನಗರದ ಕೆಲವೆಡೆ ನಿರ್ಮಿಸಿದ್ದ ವೇದಿಕೆಗಳಲ್ಲಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.