
ಪ್ರಜಾವಾಣಿ ವಾರ್ತೆ
ರೋಡ್ ಶೋ ಸಿದ್ಧತೆ
ಉಡುಪಿ: ಕೃಷ್ಣಮಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉಡುಪಿಗೆ ಬರುತ್ತಿರುವ ಪ್ರಧಾನಿ ಮೋದಿ, ಇಲ್ಲಿ ಒಂದೂವರೆ ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ.
ಆದಿ ಉಡುಪಿಯ ಹೆಲಿಪ್ಯಾಡ್‌ಗೆ ಬರುವ ಅವರು, ನಗರದ ಬನ್ನಂಜೆ ವೃತ್ತದಿಂದ ಕಲ್ಸಂಕ ವೃತ್ತದ ವರೆಗೆ ರೋಡ್ ಶೋ ನಡೆಸುವರು. ಇದಕ್ಕಾಗಿ ಬ್ಯಾರಿಕೇಡ್‌ಗಳನ್ನು ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ರೋಡ್‌ಶೋ ನಂತರ ಪ್ರಧಾನಿ, ಕೃಷ್ಣಮಠಕ್ಕೆ ತೆರಳುವರು. ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ, ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪ ಅನಾವರಣಗೊಳಿಸುವರು. ಸರ್ವಜ್ಞ ಪೀಠ, ಗೋಶಾಲೆ ದರ್ಶನ ಮಾಡಿದ ಬಳಿಕ ಅವರು ಗೀತಾಮಂದಿರಕ್ಕೆ ಭೇಟಿ ನೀಡುವರು. ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಪಠಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.