ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ...
ಉಡುಪಿ: ಕೃಷ್ಣಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಉಡುಪಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ರೋಡ್ ಶೋ ನಡೆಸಿದರು.
ಆದಿ ಉಡುಪಿಯ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ಮೋದಿ ಅವರು ಬಿಗಿ ಭದ್ರತೆಯ ನಡುವೆ, ನಗರದ ಬನ್ನಂಜೆ ವೃತ್ತದಿಂದ ರೋಡ್‌ಶೋ ಆರಂಭಿಸಿದರು. ಕಲ್ಸಂಕ ವೃತ್ತದ ವರೆಗೆ ರೋಡ್ ಶೋ ನಡೆಯಿತು.
ಪ್ರಧಾನಿ ಅವರ ರೋಡ್ ಶೋ ವೀಕ್ಷಿಸಲು ಜನರು ಬೆಳಿಗ್ಗೆಯೇ ಜಿಲ್ಲೆಯ ವಿವಿಧೆಡೆಗಳಿಂದ ಬಂದು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದಾರೆ. ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದರಿಂದ ಜನರು ವಾಹನ ಪಾರ್ಕಿಂಗ್ ಸ್ಥಳಗಳಿಂದ ನಡೆದುಕೊಂಡೇ ರೋಡ್ ಶೋ ನಡೆಯುವ ಸ್ಥಳಗಳಿಗೆ ಬಂದಿದ್ದಾರೆ.
ರೋಡ್ ಶೋ ವೇಳೆ ನಗರದ ಕೆಲವೆಡೆ ನಿರ್ಮಿಸಿರುವ ವೇದಿಕೆಗಳಲ್ಲಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನ ಏರ್ಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.