ಕಾರ್ಕಳ: ಕಾಯಿಲೆಯಿಂದ ಬಳಲುವ ಜನಸಂಖ್ಯೆಗಿಂತ ದುಶ್ಚಟಕ್ಕೆ ಬಲಿಯಾಗಿ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ ಹೇಳಿದರು.
ತಾಲ್ಲೂಕಿನ ಬೈಲೂರು ವಲಯದ ಪಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಜಾಗೃತಿ ವೇದಿಕೆಯ ಕಾರ್ಕಳ ತಾಲ್ಲೂಕು ಅಧ್ಯಕ್ಷ ಉದಯ್ ಕುಮಾರ್ ಹೆಗ್ಡೆ ಉದ್ಘಾಟಿಸಿದರು. ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಮಂಜಪ್ಪ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಶಾಂತರಾಂ ಶೆಟ್ಟಿ, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಶ್ರೀಕಾಂತ್ ಪ್ರಭು ಉಪಸ್ಥಿತರಿದ್ದರು.
ಪಳ್ಳಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಆಶಾ ಸ್ವಾಗತಿಸಿದರು. ವಲಯದ ಮೇಲ್ವಿಚಾರಕಿ ಯಶೋದಾ ನಿರೂಪಿಸಿದರು. ಶಿಕ್ಷಕಿ ಜ್ಯೋತಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.