ADVERTISEMENT

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಂಸದೆ ಕಂಗನಾ ರನೌತ್ ಭೇಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2025, 2:52 IST
Last Updated 4 ಮಾರ್ಚ್ 2025, 2:52 IST
   

ಕಾಪು(ಉಡುಪಿ): ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್‌ ಅವರು ಸೋಮವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಡುಪಿಗೆ ಆಗಮಿಸಿರುವ ಅವರನ್ನು ಸಂಸದ ಬ್ರಿಜೇಶ್‌ ಚೌಟ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಚೌಟ, ‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ ಮತ್ತು ಸಂಸದೆ ಕಂಗನಾ ರನೌತ್ ಅವರೊಂದಿಗೆ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ’ ಎಂದು ಹೇಳಿದ್ದಾರೆ.

ADVERTISEMENT

ದೇವಿಯ ದರ್ಶನ ಪಡೆದ ಕಂಗನಾ ಅವರು ನಂತರ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದಾರೆ.

ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.