ADVERTISEMENT

ಉಡುಪಿ: ಮೆಸ್ಕಾಂ ಅಧಿಕಾರಿಗಳೊಂದಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2025, 14:09 IST
Last Updated 6 ಫೆಬ್ರುವರಿ 2025, 14:09 IST
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು   

ಉಡುಪಿ: ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಕಾಣಬೇಕಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮಣಿಪಾಲದ ರಜತಾದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

‘ಸೂರ್ಯ ಘರ್ ಯೋಜನೆಯ ಅನುಷ್ಠಾನಕ್ಕೆ ವಿದ್ಯುತ್ ಬಳಕೆದಾರರಿಗೆ ಮಾಹಿತಿ ಒದಗಿಸಲು ಕಾರ್ಕಳದ ನಿಟ್ಟೆ ಗ್ರಾಮ ಪಂಚಾಯಿತಿ ಸದಸ್ಯರಾದ ನಿತಿನ್ ಸಾಲಿಯಾನ್, ಕುಂದಾಪುರ ಪುರಸಭೆ ಸದಸ್ಯ ಶೇಖರ್, ಕಾಪು ಪುರಸಭೆ ಸದಸ್ಯ ಅನಿಲ್, ಶಂಕರನಾರಾಯಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ ಶೆಟ್ಟಿ ಅವರನ್ನು ಕೇಂದ್ರ ಸರ್ಕಾರ ನೇಮಕಾತಿ ಮಾಡಿದೆ’ ಎಂದು ಹೇಳಿದರು.

ADVERTISEMENT

ಮೆಸ್ಕಾಂ ಅಧಿಕಾರಿ ದಿನೇಶ್ ಉಪಾಧ್ಯ ಮಾತನಾಡಿ, ಜಿಲ್ಲೆಯಲ್ಲಿ 5,378 ಕುಟುಂಬಗಳು ತಮ್ಮ ಮನೆಯ ಚಾವಣಿಯ ಮೇಲೆ ಸೋಲಾರ್ ಅಳವಡಿಸಲು ನೋಂದಾಯಿಸಿಕೊಂಡಿದ್ದು, 936 ಮಂದಿ ಸೋಲಾರ್ ಅಳವಡಿಕೆಗಾಗಿ ವೆಂಡರ್‌ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 439 ಫಲಾನುಭವಿಗಳ ಮನೆಗಳ ಮೇಲೆ ಸೂರ್ಯ ಘರ್ ಯೋಜನೆ ಸೌರ ಫಲಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

386 ಕುಟುಂಬಗಳ ಖಾತೆಗೆ ಸಾಲ ಮತ್ತು ಸಬ್ಸಿಡಿ ಜಮೆಯಾಗಿದೆ. ಇತ್ತೀಚೆಗೆ ನಡೆದ ಸೂರ್ಯ ಘರ್ ಯೋಜನೆಯ ಕಾರ್ಯಾಗಾರದ ನಂತರ ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು, ಲೀಡ್ ಬ್ಯಾಂಕ್‍ನ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.