ಕಾಪು (ಪಡುಬಿದ್ರಿ): ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ದಂಪತಿ ಭಾನುವಾರ ಸಂಜೆ ಕಾಪು ಮಾರಿಯಮ್ಮನ ದರ್ಶನ ಪಡೆದರು.
ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮ್ಮುಖದಲ್ಲಿ ದಂಪತಿಗೆ ಅಮ್ಮನ ಅನುಗ್ರಹ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ನೀಡಿದರು.
ದೇವಳದ ಶಿಲ್ಪಕಲೆಯ ಕೆತ್ತನೆಯ ವೈಭವವನ್ನು ತೇಜಸ್ವಿ ಸೂರ್ಯ ಶ್ಲಾಘಿಸಿದರು. ಅವರ ಪತ್ನಿ ಶಿವಶ್ರೀ ಅವರು ದುರ್ಗಾ ಸ್ತುತಿ ಹಾಡಿದರು. ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್.ಪಾಲನ್, ಕಚೇರಿ ನಿರ್ವಹಣಾ ಸಮಿತಿ ಮುಖ್ಯ ಸಂಚಾಲಕ ಸುನಿಲ್ ಎಸ್.ಪೂಜಾರಿ, ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಎಂ.ಸುವರ್ಣ, ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಆರ್ಥಿಕ ಸಮಿತಿ ಕಾತ್ಯಾಯಿನಿ ತಂಡದ ಸಂಚಾಲಕಿ ಅನಿತಾ ಹೆಗ್ಡೆ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.
ಸಂಗೀತ ಸಂಯೋಜಕ ಕೆ. ಕಲ್ಯಾಣ್ ಭೇಟಿ: ಗೀತ ರಚನೆಕಾರ ಮತ್ತು ಸಂಗೀತ ಸಂಯೋಜಕ ಕೆ.ಕಲ್ಯಾಣ್ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ದೇವಿಯ ಮುಂದೆ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ನಂತರ ನವದುರ್ಗಾ ಲೇಖನ ಯಜ್ಞದ ಪುಸ್ತಕ ಪಡೆದುಕೊಂಡರು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್.ಪಾಲನ್, ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಶ್ರೀಶ ನಾಯಕ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾಂಜಲಿ ಎಂ.ಸುವರ್ಣ, ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ್ ಆಚಾರ್ಯ, ಕಾತ್ಯಾಯಿನಿ ತಂಡದ ಸಂಚಾಲಕಿ ಅರ್ಚನಾ ಶೆಟ್ಟಿ, ಅನಿತಾ ಹೆಗ್ಡೆ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.