
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಕಾರ್ಕಳ: ತಾಲ್ಲೂಕಿನ ಮುಡಾರು ಸುಮಾ ಕಾಂಪ್ಲೆಕ್ಸ್‌ನಲ್ಲಿರುವ ಬಂಟ್ಸ್ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿಯ ಬಾಗಿಲ ಲಾಕ್ ಮುರಿದು ಕಳ್ಳತನಕ್ಕೆ ಪ್ರಯತ್ನಿಸಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಿಗ್ಗೆ ಶಾಖೆ ತೆರೆಯಲು ಬಂದಾಗ ಸಿಬ್ಬಂದಿಗೆ ಕಳವು ಯತ್ನ ಗಮನಕ್ಕೆ ಬಂದಿದೆ. ಕಾರ್ಕಳದ ಪ್ರಧಾನ ಕಚೇರಿಯಲ್ಲಿರುವ ಬಜಗೋಳಿ ಶಾಖೆಯ ಸಿ.ಸಿ.ಟಿ.ವಿ. ಕ್ಯಾಮರಾದಲ್ಲಿ ಬೆಳಗ್ಗಿನ ಜಾವ ಕಳ್ಳನೊಬ್ಬ ಆಯುಧದಿಂದ ಸೊಸೈಟಿ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ ಸೊಸೈಟಿಯ ಒಳಗೆ ಹುಡುಕಾಡಿ ಕಳವು ಮಾಡಲು ಪ್ರಯತ್ನಿಸಿರುವುದು ಪತ್ತೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.