ರಾಜ್ಯ ವಿಭೂಷಣ ಪ್ರಶಸ್ತಿ ಪುರಸ್ಕೃತ ಮುದ್ರಾಡಿ ಪ್ರೌಢಶಾಲೆಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅವರನ್ನು ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಸನ್ಮಾನಿಸಿದರು.
ಹೆಬ್ರಿ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಕಾರ್ಕಳ ಪ್ರಕಾಶ್ ಹೋಟೆಲ್ ಉತ್ಸವ ಸಭಾಂಗಣದಲ್ಲಿ ಈಚೆಗೆ ಸಂಘದ ವಾರ್ಷಿಕ ಮಹಾಸಭೆ, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳ ಸಮಾವೇಶ ನಡೆಯಿತು.
ರಾಜ್ಯ ವಿಭೂಷಣ ಪ್ರಶಸ್ತಿ ಪುರಸ್ಕೃತ ಮುದ್ರಾಡಿ ಪ್ರೌಢಶಾಲೆ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅವರನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಸನ್ಮಾನಿಸಿದರು.
ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ, ಮಾಜಿ ಅಧ್ಯಕ್ಷ ಕಿರಣ್ ಹೆಗ್ಡೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಬಿ.ಎ, ಕಾರ್ಕಳ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ ಎನ್, ಕಾರ್ಕಳ ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಸಂಜೀವ ಪೂಜಾರಿ ಎಂ, ಜಿಲ್ಲಾ ಸಂಘದ ಉಪಾಧ್ಯಕ್ಷ ಆನಂದ ಶೆಟ್ಟಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ ನಾಯ್ಕ್, ಕನ್ನಡ ಭಾಷಾ ಸಂಪನ್ಮೂಲ ಶಿಕ್ಷಕ ರಾಜೀವ ಪೂಜಾರಿ, ಜಿಲ್ಲಾ ಸಂಘದ ಕಾರ್ಯದರ್ಶಿ ನಾಗರಾಜ ತೆಕ್ಕಟ್ಟೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರೇಮಾನಂದ ಕೋಟ, ಖಜಾಂಚಿ ಸಂಪತ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.