ಉಡುಪಿ: ದಿ. ಮುಳಿಯ ತಿಮ್ಮಪ್ಪಯ್ಯ ಅವರ ಹೆಸರಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಕೊಡಮಾಡುವ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ಗೆ ಸಾಹಿತಿ ಕಬ್ಬಿನಾಲೆ ವಸಂತ ಭಾರದ್ವಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹10,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಮಾರ್ಚ್ ಕೊನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
ಕಬ್ಬಿನಾಲೆ ವಸಂತ ಭಾರದ್ವಾಜ್ ಭಾಷೆ, ವ್ಯಾಕರಣ, ಛಂದಃಶಾಸ್ತ್ರಗಳಲ್ಲಿ ವಿದ್ವತ್ತು ಪಡೆದಿದ್ದು ಗಮಕ ವ್ಯಾಖ್ಯಾನಕಾರರಾಗಿ ಪ್ರಸಿದ್ಧರಾಗಿದ್ದಾರೆ. ಕವಿಯಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ವಾಗ್ಮಿಯಾಗಿ, ಕಾವ್ಯ, ಕಥೆ, ಅನುವಾದ, ಸಂಶೋಧನೆ, ವಿಮರ್ಶೆ, ನಿಘಂಟು ರಚನೆ, ಗ್ರಂಥ ಸಂಪಾದನೆ ಸಹಿತ ವಿವಿಧ ಸಾಹಿತ್ಯ ಪ್ರಕಾರಗಳನ್ನು ಕೃಷಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.