ಹೆಬ್ರಿ: ಮುನಿಯಾಲಿನ ಕಬಡ್ಡಿ ಪಟು ದಿ.ಪ್ರೀತಮ್ ಶೆಟ್ಟಿ ಸ್ಮರಣಾರ್ಥ ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ, ಹೃದಯ ತಪಾಸಣೆ ಶಿಬಿರ ಮತ್ತು ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆ ನಡೆಯಿತು. 150 ಮಂದಿ ರಕ್ತದಾನ ಮಾಡಿದರು.
ಮುಂಬೈನ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಕಾರ್ಯಕ್ರಮ ಉದ್ಘಾಟಿಸಿದರು. ಮುನಿಯಾಲು ಹಿಂದೂ ಹೆಲ್ಪ್ ಲೈನ್ ಗೌರವಾಧ್ಯಕ್ಷ ಸುದರ್ಶನ್ ಹೆಬ್ಬಾರ್, ಮಂಗಳೂರು ಕೆಎಂಸಿಯ ಡಾ.ದಿತೇಶ್ ಎಂ, ಮಣಿಪಾಲ ಕೆಎಂಸಿಯ ಡಾ.ಗಣೇಶ್ ಮೋಹನ್, ಕಾಡುಹೊಳೆ ಜಂಗಮೇಶ್ವರ ಮಠದ ಅರ್ಚಕ ರಾಘವೇಂದ್ರ ಭಟ್, ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಉಪೇಂದ್ರ ವಾಗ್ಲೆ, ಮುನಿಯಾಲಿನ ಉದ್ಯಮಿ ಎಂ. ದಿನೇಶ್ ಪೈ, ಮುನಿಯಾಲು ಬಿಲ್ಲವ ಸಂಘದ ಅಧ್ಯಕ್ಷ ಟಿ. ಮಂಜುನಾಥ್, ಅಭಯಹಸ್ತ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲಿಯಾನ್, ಮುನಿಯಾಲು ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ್ ಪೈ, ಮುನಿಯಾಲು ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಶೆಟ್ಟಿ, ನಿತೇಶ್ ಶೆಟ್ಟಿ, ಉದ್ಯಮಿ ಹರೀಶ್ ಶೆಟ್ಟಿ ಪಡುಕೂಡೂರು, ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಅಧ್ಯಕ್ಷ ರಾಜೇಶ್ ಶೆಟ್ಟಿ ಮುನಿಯಾಲು ಪಾಲ್ಗೊಂಡಿದ್ದರು.
ಮುಟ್ಲುಪಾಡಿ ಸುಹಾಸ್ ಶೆಟ್ಟಿ ಸ್ವಾಗತಿಸಿ ರಾಮಚಂದ್ರ ನಾಯಕ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.