ADVERTISEMENT

ಮುನಿಯಾಲು ಕಾಲೇಜಿನಲ್ಲಿ ‘ಡಿಜಿಟಲ್‌ ಲೈಬ್ರರಿ’ ವಿಶೇಷ ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2023, 13:38 IST
Last Updated 11 ಡಿಸೆಂಬರ್ 2023, 13:38 IST
ಹೆಬ್ರಿ ಸಮೀಪದ ಮುನಿಯಾಲಿನ ಸರ್ಕಾರಿ ಪ್ರಥಮ ದಜೆ೯ ಕಾಲೇಜಿನ ಐ.ಕ್ಯೂ.ಎ.ಸಿ ಹಾಗೂ ಗ್ರಂಥಾಲಯ, ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಗುರುವಾರ ನಡೆದ ಡಿಜಿಟಲ್ ಲೈಬ್ರರಿ ಉಪಯೋಗಗಳ ಕುರಿತ ವಿಶೇಷ ಉಪನ್ಯಾಸವನ್ನು ಕಾರ್ಕಳ ಮಂಜುನಾಥ  ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ವೆಂಕಟೇಶ್ ನಾಯಕ್ ಉದ್ಘಾಟಿಸಿ ಮಾತನಾಡಿದರು. 
ಹೆಬ್ರಿ ಸಮೀಪದ ಮುನಿಯಾಲಿನ ಸರ್ಕಾರಿ ಪ್ರಥಮ ದಜೆ೯ ಕಾಲೇಜಿನ ಐ.ಕ್ಯೂ.ಎ.ಸಿ ಹಾಗೂ ಗ್ರಂಥಾಲಯ, ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಗುರುವಾರ ನಡೆದ ಡಿಜಿಟಲ್ ಲೈಬ್ರರಿ ಉಪಯೋಗಗಳ ಕುರಿತ ವಿಶೇಷ ಉಪನ್ಯಾಸವನ್ನು ಕಾರ್ಕಳ ಮಂಜುನಾಥ  ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ವೆಂಕಟೇಶ್ ನಾಯಕ್ ಉದ್ಘಾಟಿಸಿ ಮಾತನಾಡಿದರು.    

ಹೆಬ್ರಿ: ಮುನಿಯಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಗುರುವಾರ ಡಿಜಿಟಲ್ ಲೈಬ್ರರಿ ಉಪಯೋಗಗಳ ಕುರಿತ ವಿಶೇಷ ಉಪನ್ಯಾಸ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆಶ್ರೇಣಿ ಗ್ರಂಥಪಾಲಕ ವೆಂಕಟೇಶ್ ನಾಯಕ್ ಮಾತನಾಡಿ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ಓಪನ್ ಎಜ್ಯುಕೇಶನ್ ರಿಸೋರ್ಸ್‌ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ವಿಷಯಗಳಿಗೆ ಸಂಬಂಧಪಟ್ಟ ಅಗಾಧ ಮಾಹಿತಿ ದೊರೆಯುತ್ತದೆ. ಆದರೆ ಮಾಹಿತಿ ಪಡೆದುಕೊಳ್ಳುವ ಜ್ಞಾನದ ಕೊರತೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಪನ್ಮೂಲಗಳ ಬಳಕೆಯಿಂದ ವಂಚಿತರಾಗುತ್ತಿದ್ದಾರೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ಸ್ಪರ್ಧೆಯಲ್ಲಿರಬೇಕಾದರೆ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯ ಎಂದರು. ಮಾಹಿತಿ ಪಡೆಯಲು ಅನುಕೂಲವಾಗುವ ವಿವಿಧ ಜಾಲತಾಣಗಳ ವಿವರ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಮಂಜುನಾಥ ಆಚಾರಿ ಮಾತನಾಡಿ, ಯುವಜನರು ತಂತ್ರಜ್ಞಾನ ಸಧ್ಬಳಕೆ ಮಾಡಿಕೊಳ್ಳುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದರು.

ADVERTISEMENT

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಗ್ರಂಥಪಾಲಕಿ ಸಂಗೀತ ಎಚ್.ಎಸ್. ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ದತ್ತಕುಮಾರ್ ಪರಿಚಯಿಸಿದರು. ಕನ್ನಡ ಉಪನ್ಯಾಸಕ ವಿಜಯ್ ಕುಮಾರ್ ವಂದಿಸಿದರು. ವಿದ್ಯಾರ್ಥಿ ಗಗನ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.