ನರಸಿಂಹರಾಜಪುರ: ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಕಟ್ಟಡದಲ್ಲಿ ಸಿರಿಗನ್ನಡ ವೇದಿಕೆ ತಾಲ್ಲೂಕು ಘಟಕ, ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶುಕ್ರವಾರ (ಆ.23) ಶ್ರಾವಣ ನುಡಿಸಿರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
‘ಅಂದಿನ ರೇಡಿಯೊ ಇಂದಿನ ದೂರದರ್ಶನ’ ಎಂಬ ವಿಷಯದ ಬಗ್ಗೆ ಆಕಾಶವಾಣಿ ಭದ್ರಾವತಿಯ ನಿವೃತ್ತ ಹಿರಿಯ ಉದ್ಘೋಷಕಿ ಎ.ಎನ್.ಮಂಜುಳಾ ಉಪನ್ಯಾಸ ನೀಡುವರು.
ಸಿರಿಗನ್ನಡ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಪ್ರಕಾಶ್, ತಾಲ್ಲೂಕು ಅಧ್ಯಕ್ಷೆ ಮೀನಾಕ್ಷಿ ಕಾಂತರಾಜ್, ಶಾಶ್ವತಿ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಮಲಾ ಸತೀಶ್, ಮಡಬೂರಿನ ಎಂ.ಬಿ.ವನಮಾಲಮ್ಮ, ಎಲ್ದೊ ಹೊನ್ನೇಕೂಡಿಗೆ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.