
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಬಿರುದು ನೀಡಿ ಸನ್ಮಾನಿಸಿದರು. ಕಾಶಿ ಕಾರಿಡಾರ್ ರೀತಿಯಲ್ಲಿ ಉಡುಪಿ ಕಾರಿಡಾರ್ ಅಭಿವೃದ್ಧಿ ಪಡಿಸುವಂತೆ ಅವರು ಮನವಿ ಮಾಡಿದರು.
ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು.
ನರೇಂದ್ರ ಮೋದಿ ಅವರು, ’ಎಲ್ಲರಿಗೂ ನಮಸ್ಕಾರ..‘ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ್ದಾರೆ. ಜನಸಂಘ ಮತ್ತು ಮತ್ತು ಬಿಜೆಪಿಯ ಉತ್ತಮ ಆಡಳಿತದ ಮಾದರಿಯ ಕರ್ಮಭೂಮಿ ಉಡುಪಿ ಎಂದು ಮೋದಿ ಬಣ್ಣಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.