ಬ್ರಹ್ಮಾವರ: 39ನೇ ಸಬ್ ಜೂನಿಯರ್ ‘ಬಾಲಕಿಯರ ರಾಷ್ಟ್ರೀಯ ಹ್ಯಾಂಡ್ ಬಾಲ್ ಚ್ಯಾಂಪಿಯನ್‌ಶಿಪ್ ಕ್ರೀಡಾಕೂಟ’ದಲ್ಲಿ ಬ್ರಹ್ಮಾವರದ ಎಸ್.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ತೃಪ್ತಿ ಬೆಳ್ಳಿ ಪದಕ ಗೆದ್ದಿದ್ದಾಳೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ವತಿಯಿಂದ ನಡೆದ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 24 ರಾಜ್ಯಗಳು ಭಾಗವಹಿಸಿದ್ದವು. ಫೈನಲ್ಸ್‌ನಲ್ಲಿ ಗುಜರಾತ್ ತಂಡದೊಂದಿಗೆ ಸೆಣೆಸಿದ ಕರ್ನಾಟಕ, ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕಕ್ಕೆ ಭಾಜನವಾಯಿತು.
ತೃಪ್ತಿ ರಾಜ್ಯ ತಂಡವನ್ನು ಪ್ರತಿನಿಧಿಸಿ, ರಾಜ್ಯಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾಳೆ. ಇವರು, ಸಾಲಿಗ್ರಾಮ ಚಿತ್ರಪಾಡಿಯ ನಿತ್ಯಾನಂದ ನಾಯರಿ ಮತ್ತು ಜ್ಯೋತಿ ಅವರ ಪುತ್ರಿ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ನಾಯಕ್ ತರಬೇತಿ ನೀಡಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಫಾ. ಎಂ.ಸಿ.ಮಥಾಯ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.