ಕಿರಣ್ ಎಸ್.ಗಂಗಣ್ಣನವರ್
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಈ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಮಾರ್ಚ್ 8ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣನವರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಈ ಸಲ ಲೋಕ ಅದಾಲತ್‌ನಲ್ಲಿ 3,442 ಸಿವಿಲ್ ಪ್ರಕರಣಗಳಿದ್ದು, ಅದರಲ್ಲಿ 1,200 ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆ ಇದೆ. ವ್ಯಾಜ್ಯ ಪೂರ್ವ 3,300 ಪ್ರಕರಣಗಳಿವೆ’ ಎಂದರು.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರ್/ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳನ್ನು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
2024ರಲ್ಲಿ ನಡೆದ 4 ಲೋಕ ಅದಾಲತ್‌ಗಳಲ್ಲಿ 12,966 ವ್ಯಾಜ್ಯಗಳು ಹಾಗೂ 1,92,976 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥವಾಗಿದ್ದವು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.