ADVERTISEMENT

ರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ವಿದ್ಯಾರ್ಥಿನಿಯರಿಗೆ ಪದಕ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 7:22 IST
Last Updated 9 ಆಗಸ್ಟ್ 2025, 7:22 IST
ಪದಕ ವಿಜೇತ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು
ಪದಕ ವಿಜೇತ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು   

ಉಡುಪಿ: ಮಹಿಳಾ ಕ್ರೀಡಾಪಟುಗಳನ್ನು ಉತ್ತೇಜಿಸುವ ಸಲುವಾಗಿ ಎಚ್.ಸಿ.ಎಲ್. ಫೌಂಡೇಶನ್‌ನವರು ಚೆನ್ನೈನಲ್ಲಿ ನಡೆಸಿದ ಏಳನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ, ಕಾಲೇಜು ವಿಭಾಗದ ಪೂರ್ಣಿಮಾ ಉದ್ದಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಪ್ರೌಢಶಾಲಾ ವಿಭಾಗದ ಒಂಬತ್ತನೆಯ ತರಗತಿಯ ಮಾನ್ಯ ಹರ್ಡಲ್ಸ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಪರವಾಗಿ ಸ್ವಾಗತ ಕೋರಲಾಯಿತು. ಪ್ರಾಂಶುಪಾಲ ಜಗದೀಶ ಕುಮಾರ ಮತ್ತು ಮುಖ್ಯೋಪಾಧ್ಯಾಯಿನಿ ಇಂದಿರಾ ವಿಜೇತರನ್ನು ಸನ್ಮಾನಿಸಿದರು.

ದೈಹಿಕ ಶಿಕ್ಷಕ ವಸಂತ ಜೋಗಿ ಕ್ರೀಡಾಪಟುಗಳ ಸಾಧನೆಯ ಹೆಜ್ಜೆಗಳ ಬಗ್ಗೆ ಮಾತನಾಡಿದರು. ಶಿಕ್ಷಣ ಸೇವಾ ಸಮಿತಿಯ ಶೇಖರ ಕೋಟ್ಯಾನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.