
ಪ್ರಜಾವಾಣಿ ವಾರ್ತೆ
ಉಡುಪಿ: ಜಿಲ್ಲೆಯಲ್ಲಿ 68 ನಕ್ಸಲ್ ಪ್ರಕರಣಗಳಲ್ಲಿ 39 ಪ್ರಕರಣಗಳು ಕೋರ್ಟ್ ವಿಚಾರಣೆಯಲ್ಲಿದ್ದು, 28 ಪ್ರಕರಣಗಳು ವಿಲೇವಾರಿ ಆಗಿವೆ. 1 ಪ್ರಕರಣದಲ್ಲಿ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಲು ಬಾಕಿ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮೂವರು ಆರೋಪಿಗಳ ವಿರುದ್ಧ ಹೆಚ್ಚುವರಿ ದಾಖಲಾತಿ ಸಲ್ಲಿಸಲು ಬಾಕಿ ಇದೆ. ಒಂದು ಪ್ರಕರಣ ಸಿಐಡಿ ತನಿಖೆಯಲ್ಲಿದೆ. ಕಳೆದ 6 ತಿಂಗಳಲ್ಲಿ 39 ಪ್ರಕರಣ ಗಳಲ್ಲಿ 11 ಜನ ನಕ್ಸಲ್ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
39 ಪ್ರಕರಣಗಳಲ್ಲಿ ಹಾಜರುಪಡಿಸಿದ ಆರೋಪಿಗಳ ವಿರುದ್ಧ ನ್ಯಾಯಾಲಯ ದಲ್ಲಿ ಚಾರ್ಜ್ ಪ್ರೇಮ್ ಆಗಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.