ADVERTISEMENT

ಕೆಪಿಸಿಸಿ ಸದಸ್ಯರಾಗಿ ನೀರೆ ಕೃಷ್ಣ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 2:03 IST
Last Updated 20 ಸೆಪ್ಟೆಂಬರ್ 2022, 2:03 IST
ನೀರೆ ಕೃಷ್ಣ ಶೆಟ್ಟಿ, 
ನೀರೆ ಕೃಷ್ಣ ಶೆಟ್ಟಿ,    

ಹೆಬ್ರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಾಂಗ್ರೆಸ್‌ ಸಮಿತಿಯ ಸದಸ್ಯರನ್ನಾಗಿ ಹೆಬ್ರಿಯ ನೀರೆ ಕೃಷ್ಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ಪ್ರಸ್ತಾವನೆಯಂತೆ ಹೆಬ್ರಿ ಬ್ಲಾಕ್‌ ನಲ್ಲಿ ಸರ್ವಾನುಮತದ ಅಂಗೀಕಾರದಿಂದ ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಅವರು ಕಾಂಗ್ರೆಸ್‌ ನಾಯಕ ಡಾ.ಎಂ.ವೀರಪ್ಪ ಮೊಯಿಲಿ ಅವರಿಗೆ ಪ್ರಸ್ತಾಪ ಸಲ್ಲಿಸಿದ್ದು ಮೊಯಿಲಿ ಶಿಫಾರಸ್ಸಿನಂತೆ ನೇಮಕ ಮಾಡಲಾಗಿದೆ.

ಕಾಂಗ್ರೆಸ್‌ ಪಕ್ಷದ ಸಾಮಾನ್ಯ ಸದಸ್ಯರಾಗಿ ಪಕ್ಷ ಸೇರಿದ ನೀರೆ ಕೃಷ್ಣ ಶೆಟ್ಟಿ ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ, ಹಲವು ವಿಧಾನ ಸಭಾ ಕ್ಷೇತ್ರಗಳ ಬ್ಲಾಕ್‌ ಉಸ್ತುವಾರಿಯಾಗಿ, ಪಂಚಾಯಿತಿರಾಜ್‌ ಇಲಾಖೆಯ ಬಗ್ಗೆ ಅಪಾರ ಅನುಭವ ಹೊಂದಿರುವ ನೀರೆ ಕೃಷ್ಣ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜಕೀಯ ಧಾರ್ಮಿಕ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರೀಯರಾಗಿದ್ದ ಅವರು ಹೆಬ್ರಿ ತಾಲ್ಲೂಕು ರಚನಾ ಹೋರಾಟದಲ್ಲಿ ಸಂಚಾಲಕರಾಗಿ ಮುಂಚೂಣಿಯಲ್ಲಿದ್ದರು.

ಚಾರ ನಿವೇಶನ ಪ್ರಕರಣದಲ್ಲಿ ಹೋರಾಟ ಮಾಡಿ ನಿವೇಶನ ರಹಿತರ ಪಾಲಿಗೆ ನ್ಯಾಯ ದೊರಕಿಸಲು ಹೋರಾಟ ಮಾಡಿದ್ದರು. ಹೆಬ್ರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾಗಿ, ಹೆಬ್ರಿಯ ಪ್ರತಿಷ್ಠಿತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ನೀರೆ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾಗಿ ತಾನು ಸೇವೆ ಮಾಡಿದ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಕಳೆದ ೪೦ ವರ್ಷಗಳಿಂದ ಕಾಂಗ್ರೆಸ್‌ ಪಕ್ಷ ಮತ್ತು ಸಮಾಜಕ್ಕಾಗಿ ದುಡಿಯುತ್ತಿದ್ದಾರೆ. ಉಡುಪಿ ಜಿಲ್ಲೆಯ ಹಲವಾರು ಜನಪರ ಸಂಘಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.