ADVERTISEMENT

ನೇತ್ರಜ್ಯೋತಿ ಕಾಲೇಜು: ರಸ್ತೆ ಸುರಕ್ಷತಾ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 13:08 IST
Last Updated 17 ಜೂನ್ 2025, 13:08 IST
ನಗರದ ನೇತ್ರಜ್ಯೋತಿ ಕಾಲೇಜಿನಲ್ಲಿ  ಸಂಚಾರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಈಚೆಗೆ ಹಮ್ಮಿಕೊಳ್ಳಲಾಗಿತ್ತು
ನಗರದ ನೇತ್ರಜ್ಯೋತಿ ಕಾಲೇಜಿನಲ್ಲಿ  ಸಂಚಾರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಈಚೆಗೆ ಹಮ್ಮಿಕೊಳ್ಳಲಾಗಿತ್ತು   

ಉಡುಪಿ: ನಗರದ ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಚಾರ ಪೊಲೀಸ್ ಠಾಣೆ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಈಚೆಗೆ ಏರ್ಪಡಿಸಲಾಗಿತ್ತು.

ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹುಸೇನ್ ಸಾಬ್ ಮಾತನಾಡಿ, ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕಾರಣರಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಜೀವ ಅಮೂಲ್ಯವಾಗಿದ್ದು, ಅದನ್ನು ನಾವೇ ರಕ್ಷಿಸಬೇಕು. ಮಾನವೀಯ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಹೆಡ್ ಕಾನ್‌ಸ್ಟೆಬಲ್‌ಗಳಾದ ರುಕ್ಮೈಯೆರ್, ಸಾವಿತ್ರಿ, ಅಕ್ಷತಾ, ಶ್ರೀನಿವಾಸ್, ಅರುಣ್, ಕಾಲೇಜಿನ ಸಿಒಒ ಡಾ.ಗೌರಿ ಪ್ರಭು, ಎಚ್.ಆರ್. ತಾರಾ ಶಶಿಧರ್, ಸಚಿನ್ ಶೇಟ್, ನಾಗರಾಜ ಮೆಂಡನ್ ಭಾಗವಹಿಸಿದ್ದರು. ಮಾಧವ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀನಿಧಿ ವಂದಿಸಿದರು. ಅಶ್ವಿನಿ ಪಾಟೀಲ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.