ADVERTISEMENT

ಉಡುಪಿ: ಪಿಎಫ್‌ಐ ಪ್ರತಿಭಟನೆ, ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 14:42 IST
Last Updated 22 ಸೆಪ್ಟೆಂಬರ್ 2022, 14:42 IST
ರಾಷ್ಟ್ರೀಯ ತನಿಖಾ ದಳ ಪಿಎಫ್‌ಐ ಕಚೇರಿ ಮೇಲೆ ನಡೆಸುತ್ತಿರುವ ದಾಳಿ ಖಂಡಿಸಿ ನಗರದ ಹಳೆ ಡಯಾನ ಸರ್ಕಲ್‌ ಬಳಿ ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸದ ಪಿಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ರಾಷ್ಟ್ರೀಯ ತನಿಖಾ ದಳ ಪಿಎಫ್‌ಐ ಕಚೇರಿ ಮೇಲೆ ನಡೆಸುತ್ತಿರುವ ದಾಳಿ ಖಂಡಿಸಿ ನಗರದ ಹಳೆ ಡಯಾನ ಸರ್ಕಲ್‌ ಬಳಿ ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸದ ಪಿಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.   

ಉಡುಪಿ: ರಾಷ್ಟ್ರೀಯ ತನಿಖಾ ದಳ ಪಿಎಫ್‌ಐ ಕಚೇರಿ ಮೇಲೆ ನಡೆಸುತ್ತಿರುವ ದಾಳಿ ಖಂಡಿಸಿ ನಗರದ ಹಳೆ ಡಯಾನ ಸರ್ಕಲ್‌ ಬಳಿ ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸದ ಪಿಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ಏಕಾಏಕಿ ಸರ್ಕಲ್‌ನಲ್ಲಿ ಜಮಾಯಿಸಿದ ಕಾರ್ಯಕರ್ತರು ಬಿಜೆಪಿ ಸರ್ಕಾರದ ಧೋರಣೆ ಖಂಡಿಸಿ ಘೋಷಣೆಗಳನ್ನು ಕೂಗಿದರು. ಕೂಡಲೇ ಮಧ್ಯೆ ಪ್ರವೇಶಿಸಿದ ಪೊಲೀಸರು ಲಾಠಿ ಬೀಸಿ ಕಾರ್ಯಕರ್ತರನ್ನು ಚದುರಿಸಿದರು.

ಪ್ರತಿರೋಧ ತೋರಿದ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.