ADVERTISEMENT

ಉಡುಪಿ | ಜಿಲ್ಲೆಯಲ್ಲಿ 9 ಮಂದಿಗೆ ಕೋವಿಡ್ ಸೋಂಕು

​ಪ್ರಜಾವಾಣಿ ವಾರ್ತೆ
Published 27 ಮೇ 2020, 8:25 IST
Last Updated 27 ಮೇ 2020, 8:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಬುಧವಾರ 9 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಈಚೆಗೆ ಉಡುಪಿಗೆ ಬಂದು ಕ್ವಾರಂಟೈನ್‌ನಲ್ಲಿದ್ದವರಲ್ಲಿ ಸೋಂಕು ಪತ್ತೆಯಾಗಿದ್ದು, ಎಲ್ಲರನ್ನೂ ಡಾ.ಟಿಎಂಎ ಪೈ ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

41, 27, 30, 32, 34, 25 ವರ್ಷದ ಪುರುಷರು. 17 ವರ್ಷದ ಯುವತಿ, 31 ವರ್ಷದ ಮಹಿಳೆ ಹಾಗೂ 9 ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ವಿವರ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಮೂವರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 114 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಸಂಖ್ಯೆ 120ಕ್ಕೇರಿಕೆಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.