ಉಡುಪಿ: ನಿರಂಜನ ಅವರು ಕನ್ನಡದ ಪಾಲಿಗೆ ಕೇವಲ ಕಥೆಗಾರ, ಕಾದಂಬರಿಕಾರರಷ್ಟೇ ಅಲ್ಲ, ವೈಯಕ್ತಿಕ ಬದುಕಿನ ನೋವಿನ ನಡುವೆಯೂ ಸಮಾಜದ ಘನತೆಗಾಗಿ ಇಡೀ ಬದುಕನ್ನು ಮುಡಿಪಾಗಿಟ್ಟ ಹೋರಾಟಗಾರ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರೊ. ಜಯಪ್ರಕಾಶ್ ಶೆಟ್ಟಿ ಹೇಳಿದರು.
ಕಾದಂಬರಿಕಾರ ನಿರಂಜನರ ನೂರರ ನೆನಪಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ನಿರಂಜನ ನೂರರ ನೆನಪು ಮತ್ತು ಕಥೆಯ ರಂಗರೂಪಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿರಂಜನರು ಜನಪರ ಪತ್ರಕರ್ತರಾಗಿಯೂ ತಮ್ಮದೇ ಛಾಪನ್ನು ಮೂಡಿಸಿದವರು ಎಂದು ಹೇಳಿದರು.
ಪ್ರಭಾರ ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಸದಾನಂದ ಬೈಂದೂರು, ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ನಾಗಪ್ಪ ಗೌಡ, ಐಕ್ಯೂಎಸಿ ಸಂಚಾಲಕಿ ಮೇವಿ ಮಿರಾಂದ, ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ, ಸಂಧ್ಯಾರಾಣಿ, ಅರ್ಚನ ಹಾಗೂ ಶಾಲಿನಿ ಇದ್ದರು. ಶರಿತಾ ಹೆಗ್ಡೆ ನಿರೂಪಿಸಿದರು. ಭಾರತಿ ವಂದಿಸಿದರು.
ಬಳಿಕ ವಾಸುದೇವ ಗಂಗೇರ ಅವರ ನಿರ್ದೇಶನದಲ್ಲಿ ನಿರಂಜನ ಸಣ್ಣಕಥೆ ‘ಧ್ವನಿ’ಯ ರಂಗರೂಪದ ಪ್ರದರ್ಶನ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.