ADVERTISEMENT

ಉಚಿತ ಡಯಾಲಿಸಿಸ್‌ ಕೇಂದ್ರ ಉದ್ಘಾಟನೆ 29ರಂದು

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 13:21 IST
Last Updated 27 ಜೂನ್ 2022, 13:21 IST

ಉಡುಪಿ: ನಿರಂತರ ಚಾರಿಟೆಬಲ್ ಟ್ರಸ್ಟ್‌ ಕೊಕ್ಕರ್ಣೆ ಆಶ್ರಯದಲ್ಲಿ ಬಹ್ಮಾವರದ ಪ್ರಣವ್ ಆಸ್ಪತ್ರೆಯಲ್ಲಿ ಉಚಿತ ಹೊರ ರೋಗಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ.ನಿರಂಜನ ಶೆಟ್ಟಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂನ್ 29ರಂದು ಬೆಳಿಗ್ಗೆ 10.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ರಘುಪತಿ ಭಟ್‌ ಡಯಾಲಿಸ್ ಯಂತ್ರಕ್ಕೆ ಚಾಲನೆ ನೀಡಲಿದ್ದಾರೆ. ಕುಮಟಾ ಹೊನ್ನಾವರ ಶಾಸಕ ದಿನಕರ ಕೆ.ಶೆಟ್ಟಿ ಮೊಡ್ಯುಲರ್ ಮತ್ತು ಲ್ಯಾಮಿನರ್ ಫ್ಲೋ ಆಪರೇಷನ್ ಥಿಯೇಟರ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ನಿರಂತರ ಚಾರಿಟೆಬಲ್‌ ಟ್ರಸ್ಟ್‌ ಆರೋಗ್ಯ, ಶಿಕ್ಷಣ, ಕೃಷಿ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು ಬಡ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಡಯಾಲಿಸಿಸ್‌ ಕೇಂದ್ರ ತೆರೆಯಲಾಗುತ್ತಿದೆ. ಕೇಂದ್ರ ದಿನದ 12 ಗಂಟೆ ಸೇವೆಗೆ ಲಭ್ಯವಿರಲಿದ್ದು, ಪ್ರತಿದಿನ 10 ರೋಗಿಗಳಿಗೆ ಡಯಾಲಿಸಿಸ್‌ ಗುರಿ ಹೊಂದಲಾಗಿದೆ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಡಿಎಚ್‌ಒ ಡಾ.ನಾಗಭೂಷಣ ಉಡುಪ, ಉಡುಪಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಉಡುಪಿ ನಗರಸಭೆ ಪೌರಾಯುಕ್ತ ಡಾ.ಉದಯ್‌ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್.ಉಪೇಂದ್ರ ಶೆಟ್ಟಿ, ಬ್ರಹ್ಮಾವರ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಮೈರ್ಮಾಡಿ, ಉದ್ಯಮಿ ಆನಂದ ಸಿ.ಕುಂದರ್, ಸುಧೀರ್ ಪಂಡಿತ್‌, ಡಾ.ಸಂತೋಷ್ ಪೈ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊಕ್ಕರ್ಣೆ ಬಾಲಕೃಷ್ಣ ಹೆಗ್ಡೆ, ನವನೀತ್ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಹರೀಶ್ ಶೆಟ್ಟಿ ಚೇರ್ಕಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.