ADVERTISEMENT

ಕೃಷ್ಣಮಠ, ಕೊಲ್ಲೂರು ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಮೇ 2022, 13:13 IST
Last Updated 14 ಮೇ 2022, 13:13 IST
ಉಡುಪಿಯ ಕೃಷ್ಣಮಠಕ್ಕೆ ಶನಿವಾರ ಭೇಟಿನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕನಕನ ಕಿಂಡಿಯಲ್ಲಿ ಕೃಷ್ಣನ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿಯ ಕೃಷ್ಣಮಠಕ್ಕೆ ಶನಿವಾರ ಭೇಟಿನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕನಕನ ಕಿಂಡಿಯಲ್ಲಿ ಕೃಷ್ಣನ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.   

ಉಡುಪಿ: ಉಡುಪಿಯ ಕೃಷ್ಣಮಠ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮೊದಲಿಗೆ ಕೃಷ್ಣಮಠದಲ್ಲಿ ಕನಕನ ಕಿಂಡಿಯಲ್ಲಿ ಕೃಷ್ಣನ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್, ತಹಶೀಲ್ಧಾರ್ ಅರ್ಚನಾ ಭಟ್, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್, ವಾಸುದೇವ ಪೆರಂಪಳ್ಳಿ ಇದ್ದರು.

ADVERTISEMENT

ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿನೀಡಿ ದೇವಿಯ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.