ADVERTISEMENT

ಸಮೀಕ್ಷೆಯಲ್ಲಿ ಭಾರತಕ್ಕೆ ಉತ್ತಮ ಭವಿಷ್ಯ

ನಿಟ್ಟೆ ಎನ್‌ಎಂಎಎಂ ಎಂಸಿಎ ವಿಭಾಗದ ‘ಸೆಮಫೋರ್’ ಸಾಂಸ್ಕೃತಿಕ ಉತ್ಸವ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 8:38 IST
Last Updated 6 ಜನವರಿ 2023, 8:38 IST
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ಎಂಸಿಎ ವಿಭಾಗದ ‘ಸೆಮಫೋರ್’ ಸಾಂಸ್ಕೃತಿಕ ಉತ್ಸವವನ್ನು ಬೆಂಗಳೂರಿನ ಫಿಡಿಲಿಟಿ ಇನ್ವೆಸ್ಟ್‌ಮೆಂಟ್ಸ್‌ ಸಾಫ್ಟ್‌ವೇರ್ ಎಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷ ಹೇಮಂತ್ ಕುಮಾರ್ ಉದ್ಘಾಟಿಸಿದರು
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ಎಂಸಿಎ ವಿಭಾಗದ ‘ಸೆಮಫೋರ್’ ಸಾಂಸ್ಕೃತಿಕ ಉತ್ಸವವನ್ನು ಬೆಂಗಳೂರಿನ ಫಿಡಿಲಿಟಿ ಇನ್ವೆಸ್ಟ್‌ಮೆಂಟ್ಸ್‌ ಸಾಫ್ಟ್‌ವೇರ್ ಎಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷ ಹೇಮಂತ್ ಕುಮಾರ್ ಉದ್ಘಾಟಿಸಿದರು   

ಕಾರ್ಕಳ: ‘ವಿಶ್ವದ ವಿವಿಧ ದೇಶಗಳು ಹಣದುಬ್ಬರ, ಯುದ್ಧಗಳು, ದಿವಾಳಿತನ, ಆಂತರಿಕ ವೈಷಮ್ಯ, ಕೋವಿಡ್‌ನಂತಹ ಕಷ್ಟಗಳನ್ನು ಅನುಭವಿ ಸುತ್ತಿರುವ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿವಿಧ ವಿಚಾರಗಳನ್ನು ವಿಮರ್ಶಿಸುವ ಐಎಂಎಫ್‌ನ ಅಧ್ಯಯನದ ಪ್ರಕಾರ ಭಾರತ ದೇಶವು ಉತ್ತಮ ಭವಿಷ್ಯವನ್ನು ಹೊಂದಿರುವ ದೇಶವಾಗಿದೆ’ ಎಂದು ಬೆಂಗಳೂರಿನ ಫಿಡಿಲಿಟಿ ಇನ್ವೆಸ್ಟ್‌ಮೆಂಟ್ಸ್‌ ಸಾಫ್ಟ್ ವೇರ್ ಎಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷ ಹೇಮಂತ್ ಕುಮಾರ್ ಹೇಳಿದರು.

ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ಎಂಸಿಎ ವಿಭಾಗದ ‘ಸೆಮಫೋರ್’ ಸಾಂಸ್ಕೃತಿಕ ಉತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ನಿರಂತರ ಕಲಿಕೆ ಹಾಗೂ ವಿವಿಧ ವಿಷಯಗಳ ಕುರಿತ ಆಸಕ್ತಿ ನಮ್ಮ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ. ಯಾವುದೇ ವೃತ್ತಿಯಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಪಾಲಿಸಬೇಕಾದ ನೀತಿಗಳ ಕುರಿತು ಅರಿವು ಬೆಳೆಸಿಕೊಳ್ಳುವುದು ಅತಿ
ಮುಖ್ಯ. ಆರೋಗ್ಯ ಸೇತುವಿನಂತಹ ಆ್ಯಪ್‌ ಮೂಲಕ ಕೋವಿಡ್ ಲಸಿಕೆಯ ಮಾಹಿತಿ ಬಿತ್ತರಿಕೆ ವಿಶ್ವದಲ್ಲೇ ಮೊದಲ ಪ್ರಯತ್ನವಾಗಿದ್ದು ಇದರ ಯಶಸ್ಸು ಭಾರತದ ಸಾಧನೆಗೆ ಹಿಡಿದ ಕೈಗನ್ನಡಿ’ ಎಂದರು

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಮಾತನಾಡಿ, ನಿಟ್ಟೆ ಸಂಸ್ಥೆಯ ಎಂ.ಸಿ.ಎ ವಿಭಾಗವು ಕಳೆದ 25 ವರ್ಷಗಳಿಂದ ಈ ಉತ್ಸವವನ್ನು ನಡೆಸುತ್ತ ಬಂದಿದೆ. ವಿದ್ಯಾರ್ಥಿಗಳ ಸೃಜನಶೀಲತೆ ಪ್ರದರ್ಶಿಸಲು ಇದು ಉತ್ತಮ ವೇದಿಕೆಯಾಗಿದೆ ಎಂದರು.

ADVERTISEMENT

ಕಾಲೇಜಿನ ಎಂ.ಸಿ.ಎ ವಿಭಾಗದ ಮುಖ್ಯಸ್ಥ ಡಾ. ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ಸಂಯೋಜಕಿ ಡಾ. ಸ್ಫೂರ್ತಿ ಬಿ. ಶೆಟ್ಟಿ ಹಾಗೂ ವಿದ್ಯಾರ್ಥಿ ಸೌರವ್ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಸ್ಯಾಮ್ಕಾ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೋಯೆಲ್ ಜೋಸೆಫ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಶ್ರಾವ್ಯಾ ಎ ಆಚಾರ್ಯ ವಂದಿಸಿದರು. ವಿದ್ಯಾರ್ಥಿನಿ ಮಾನಸಾ ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ರಶ್ಮಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.